ಕಾಂಗ್ರೆಸ್ ತೊರೆದು ಮರಳಿ ಬಿಜೆಪಿಗೆ ಸೇರ್ಪಡೆಯಾದ ನಗರಸಭಾ ಸದಸ್ಯ ಶಿವರಾಜ್.
ದೊಡ್ಡಬಳ್ಳಾಪುರ:ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿ ಕೊಂಡಿದ್ದ 12ನೇ ವಾರ್ಡಿನ ನಗರಸಭಾ ಸದಸ್ಯ ಶಿವರಾಜ್ ಕಾಂಗ್ರೆಸ್ ತೊರೆದು ಬಿಜೆಪಿ ಗೆ ಸೇರ್ಪಡೆಯಾಗಿದ್ದಾರೆ.
ಮೂಲತಃ ಬಿಜೆಪಿ ಗರಾಗಿದ್ದ ಶಿವರಾಜ್ ಕಳೆದ ನಗರಸಭಾ ಚುನಾವಣೆಯಲ್ಲಿ ಬಿಜೆಪಿ ಯಿಂದ ಸ್ಪರ್ದಿಸಿ ಗೆಲುವು ಕಂಡಿದ್ದರು. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪಕ್ಷದ ನಾಯಕರು ತನ್ನನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲವೆಂದು ಬಿಜೆಪಿ ತೊರೆದು ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದರು. ಆದರೆ ಕಾಂಗ್ರೆನಲ್ಲಿ ತನಗೆ ಸೂಕ್ತ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಬೇಸತ್ತು ಮರಳಿ ಬಿಜೆಪಿಗೆ ಸೇರ್ಪಡೆ ಯಾಗಿ ಕಾಂಗ್ರೆಸ್ಗೆ ಶಾಕ್ ನೀಡಿದ್ದಾರೆ. ಇಂದು ಶಾಸಕ ಧೀರಜ್ ಮುನಿರಾಜುರವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆ ಗೊಂಡರು. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶಿವರಾಜ್, ನಾನು ಮೂಲತಃ ಬಿಜೆಪಿಗನಾಗಿದ್ದು ಸಣ್ಣ ಪುಟ್ಟ ಬಿನ್ನಾಭಿಪ್ರಾಯದ ಹಿನ್ನೆಲೆ ಪಕ್ಷದಿಂದ ದೂರ ಉಳಿದಿದ್ದೆ. ಈಗ ಮತ್ತೆ ಬಿಜೆಪಿಗೆ ಮರಳಿದ್ದೇನೆ ಎಂದು ಶಿವರಾಜ್ ಹೇಳಿದ್ದಾರೆ.