ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಧೀರಜ್ ಮುನಿರಾಜು ಪರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಬೃಹತ್ ರೋಡ್ ಶೋ ನಡೆಸಿ ಮತಯಾಚನೆ ಮಾಡಲಿದ್ದಾರೆ.
ಭಾನುವಾರ ಬೆಳಿಗ್ಗೆ 10.45 ಕ್ಕೆ ನಗರದ ನೆಲದಾಂಜನೇಯ ಸ್ವಾಮಿ ದೇವಸ್ಥಾನದಿಂದ ರೋಡ್ ಶೋ ಆರಂಭವಾಗಲಿದ್ದು, ನಗರದ ಪ್ರಮುಖ ಬೀದಿಗಳ ಮೂಲಕ ತಹಶೀಲ್ದಾರ್ ಕಚೇರಿವರೆಗೆ ಮೆರವಣಿಗೆ ನಡೆಯಲಿದೆ.
*ಬದಲಾವಣೆ*
ಬಾಶೆಟ್ಟಿಹಳ್ಳಿಯಲ್ಲಿ ಆರಂಭವಾಗಬೇಕಿದ್ದ ರೋಡ್ ಶೋ, ಕೊನೆ ಕ್ಷಣದಲ್ಲಿ ಬಾಶೆಟ್ಟಿಹಳ್ಳಿ ಬದಲಿಗೆ ನಗರದಿಂದ ಆರಂಭಿಸಲು ತೀರ್ಮಾನಿಸಲಾಯಿತು ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜು, ಸಚಿವ ಡಾ.ಕೆ.ಸುಧಾಕರ್, ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್, ಬಮೂಲ್ ನಿರ್ದೇಶಕ ಬಿ.ಸಿ.ಆನಂದ್, ಹಿರಿಯ ಮುಖಂಡ ಕೆ.ಎಚ್.ಹನುಮಂತರಾಯಪ್ಪ, ಟಿ.ವಿ ಲಕ್ಷ್ಮಿನಾರಾಯಣ ಸೇರಿದಂತೆ ಹಲವು ಮುಖಂಡರು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ.
ಹಾಗಾಗಿ ತಾಲೂಕಿನ ಎಲ್ಲ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬಿಜೆಪಿ ತಾಲೂಕು ಘಟಕ ಪ್ರಕಟಣೆಯಲ್ಲಿ ತಿಳಿಸಿದೆ