ಬಿಜೆಪಿ ಒಳ ಮೀಸಲಾತಿ ವಿಚಾರದಲ್ಲಿ ರಾಜ್ಯದ ಜನತೆ ಯನ್ನು ದಿಕ್ಕು ತಪ್ಪಿಸುತ್ತಿದೆ ಎಂದು ಕೇಂದ್ರ ಮಾಜಿ ಸಚಿವ ದೇವನಹಳ್ಳಿ ವಿಧಾನಸಭಾ ಕ್ಷೇತ್ರ ದ ಕಾಂಗ್ರೆಸ್ ಅಭ್ಯರ್ಥಿ ಕೆ ಹೆಚ್ muniyappa👍🏻ಆರೋಪಿಸಿದ್ದಾರೆ
ಹಾಡೋನಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯದಲ್ಲಿ ನಡೆದ ಸಭೆಯಲ್ಲಿ ಮುನಿಯಪ್ಪ ಮಾತನಾಡಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ. ರಾಜ್ಯದಲ್ಲಿ adalita👍🏻ವಿರೋಧಿ ಅಲೆ ಎದ್ದು ಕಾಣುತ್ತಿದೆ. ಗ್ಯಾಸ್ ಪೆಟ್ರೋಲ್ ದಿನಬಳಕೆ ವಸ್ತುಗಳ ಬೆಲೆ ಏರಿಕೆಇಂದಾಗಿ ಜನಸಾಮಾನ್ಯರ ಬದುಕು ದುಸ್ತರ ಗೊಂಡಿದೆ. ಭ್ರಷ್ಟ ಬಿಜೆಪಿ ಆಡಳಿತದ ಈ ನಡೆಗೆ ರಾಜ್ಯದ ಜನ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದ ಮುನಿಯಪ್ಪ ಹಿಂದೆ ಕಾಂಗ್ರೆಸ್ ಶಾಸಕರ ಅವಧಿಯಲ್ಲಿ ತೂಬಗೆರೆ ಹೋಬಳಿ ಯಲ್ಲಿ ಹಲವಾರು ಅಭಿವೃದ್ದಿ ಕಾರ್ಯಗಳು ನಡೆದಿದ್ದವು. ಈ ಬಾರಿ kangres👍🏻ಅಧಿಕಾರಕ್ಕೆ ಬರುವುದು ನಿಶ್ಚಿತ ಹಾಗಾಗಿ ಮುಂದಿನ ದಿನಗಳಲ್ಲಿ ತೂಬಗೆರೆ ಹೋಬಳಿಗೆ ಉದ್ಯೋಗ ತರಬೇತಿ ಕೇಂದ್ರ ಸೇರಿದಂತೆ ಹಲವಾರು ಜನಪರ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಹಂಬಲ ನನ್ನದು.
ಕಾಂಗ್ರೆಸ್ ಸರ್ಕಾರದ ಹಲವಾರು ಜನಪರ ಯೋಜನೆಗಳನ್ನು ರಾಜ್ಯದ ಜನತೆ ಇನ್ನೂ ಮರೆತಿಲ್ಲ ಹಾಗಾಗಿ ಈ ಬಾರಿ ಬಿಜೆಪಿಯ ಭ್ರಷ್ಟ ಆಡಳಿತವನ್ನು ಜನತೆ ತೊಲಗಿಸಲಿದ್ದಾರೆ. ಈಗಾಗಲೇ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾದ ಅಲೆ ಎದ್ದಿದೇ. ವಿಪಕ್ಷಗಳ ಅಸೆ ಆಮಿಷಗಳಿಗೆ ಬಲಿಯಾಗದೆ ಕಾಂಗ್ರೇಸ್ಸನ್ನು ತೂಬಗೆರೆ ಹೋಬಳಿ ಜನತೆ ಬೆಂಬಲಿಸಬೇಕೆಂದು ಮತದಾರರಲ್ಲಿ ಮುನಿಯಪ್ಪ ಮನವಿ ಮಾಡಿದ್ದಾರೆ
ಪ್ರಚಾರ ಸಭೆಯ ಸಂದರ್ಭದಲ್ಲಿ ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಪ್ಪ, ಕೆಪಿಸಿಸಿ ಸದಸ್ಯ ಎಸ್ ಆರ್ ಮುನಿರಾಜು, ಪ್ರಚಾರ ಸಮಿತಿ ಅಧ್ಯಕ್ಷ, ಚಿದಾನಂದ್, ಯುವ ಮುಖಂಡ ಆರ್ ವಿ ಮಹೇಶ್ ಮನುಕುಮಾರ್, ವಿ ಎಸ್ ಎಸ್ ಏನ್ ಮಾಜಿ ಅಧ್ಯಕ್ಷ ಶ್ರೀಧರ್, ಸವಿತಾ, ಮುತ್ತರಾಯಪ್ಪ ಮುಂತಾದವರು ಹಾಜರಿದ್ದರು