ಗಿಡ ನೆಡುವ ಕಾರ್ಯಕ್ರಮದಲ್ಲಿ ಚಾಮರಾಜನಗರ ಜಿಲ್ಲೆಗೆ ಪ್ರಥಮ ಸ್ಥಾನ
ಚಾಮರಾಜನಗರ:ಅಂತರಾಷ್ಟೀಯ ಪ್ರಜಾಪ್ರಭುತ್ವ ದಿನಾಚರಣೆ: ಅತಿ ಹೆಚ್ಚು ಗಿಡ ನೆಡುವ ಕಾರ್ಯಕ್ರಮದಲ್ಲಿ ಚಾಮರಾಜನಗರ ಜಿಲ್ಲೆಗೆ ಪ್ರಥಮ ಸ್ಥಾನ ದೊರೆತಿದ್ದು, ಇಂದು ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯನವರು ಪ್ರಶಸ್ತಿ ಪ್ರದಾನ ಮಾಡಿದರು.
ಕರ್ನಾಟಕ ರಾಜ್ಯ ಸರ್ಕಾರವು ಕಳೆದ ಸೆಪ್ಟಂಬರ್ 15 ರಂದು ಅಂತರಾಷ್ಟೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವಿವಿಧ ಕಾರ್ಯಕ್ರಮಗಳ ವಿಭಾಗದಲ್ಲಿ ಚಾಮರಾಜನಗರ ಜಿಲ್ಲೆಯು ಅತಿ ಹೆಚ್ಚು ಗಿಡಗಳನ್ನು ನೆಡುವ ವಿಭಾಗದಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ದೊರಕಿತು.
ಬೆಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿರುವ ಸಂವಿಧಾನ ದಿನಾಚರಣೆಯ ಕಾರ್ಯಕ್ರಮದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಐಎಎಸ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೊನಾ ರೋತ್ ಐಎಎಸ್ ರವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು.
ವರದಿ ಆರ್ ಉಮೇಶ್ ಮಲಾರಪಾಳ್ಯ