ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮಾದಕ ವ್ಯಸನಗಳ ದುಷ್ಪರಿಣಾಮಗಳ ಅರಿವು ಕಾರ್ಯಕ್ರಮ

ದೊಡ್ಡಬಳ್ಳಾಪುರ:ದೊಡ್ಡಬಳ್ಳಾಪುರ ತಾಲ್ಲೂಕಿನ,ದೊಡ್ಡಬೆಳವಂಗಲ ಹೋಬಳಿ ಹುಲಿಕುಂಟೆ ಸರ್ಕಾರಿ ಪ್ರೌಢಶಾಲೆ ಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲ್ಲೂಕು ಇವರ ವತಿಯಿಂದ ಮಾದಕ ವ್ಯಸನಗಳ ದುಷ್ಪರಿಣಾಮಗಳ ಅರಿವಿಗಾಗಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು

ಕಾರ್ಯಕ್ರಮದಲ್ಲಿ ಜಿಲ್ಲಾ ನಿರ್ದೇಶಕರಾದ ಉಮರಬ್ಬ ಮಾತನಾಡಿ ಭಾರತ ವಿಶ್ವದಲ್ಲಿ ಅತೀ ಹೆಚ್ಚು ಯುವಕ ಯುವತಿಯರನ್ನು ಹೊಂದಿದ ದೇಶವಾಗಿದೆ ಹೆಚ್ಚಿನ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗುತ್ತಿದ್ದು ಆತಂಕಕಾರಿ ಬೆಳವಣಿಗೆಯಾಗಿದೆ
ಮಹಾತ್ಮ ಗಾಂಧೀಜಿ ಅವರ ದುಶ್ಚಟ ಮುಕ್ತ ದೇಶದ ಕನಸು .ಆ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ವ್ಯಸನ ಮುಕ್ತ ಸಮಾಜಕ್ಕೆ ಅರಿವು ಕಾರ್ಯಕ್ರಮಗಳು ಅತಿ ಮುಖ್ಯವಾಗಿದೆ ಎಂದರು
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಗೋವಿಂದರಾಜು ಮಾತನಾಡಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಬೀಡಿ, ಸಿಗರೇಟು,ಗುಟ್ಕಾ , ಗಾಂಜಾ,ಅಫೀಮ್, ಮದ್ಯಸೇವನೆ ಸೇರಿ ಇನ್ನಿತರ ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯದ ಮೇಲೆ ಸಾಕಷ್ಟು ದುಷ್ಪರಿಣಾಮ ಬೀರಲಿದೆ ಎಂದರು

ಈ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಶ್ರೀ ಮುನಿಕೃಷ್ಣಪ್ಪ ಹಾಗೂ ತಾಲ್ಲೂಕು ಯೋಜನಾಧಿಕಾರಿ ಶ್ರೀಮತಿ ಸುಧಾ ಭಾಸ್ಕರ್ ವಲಯ ಮೇಲ್ವಿಚಾರಕರು
ಶ್ರೀಮತಿ ಅನ್ನಪೂರ್ಣ
ಮತ್ತು ಸೇವಾ ಪ್ರತಿನಿಧಿಗಳು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.