ಬೆಂಗಳೂರು ಜಿಲ್ಲಾ ಪೊಲೀಸ್, ಸೂರ್ಯ ಪದವಿ ಪೂರ್ವ ಕಾಲೇಜು, ಕ. ಜಾ. ಪ ಗಳ ಸಹಯೋಗದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ

ದೊಡ್ಡಬಳ್ಳಾಪುರ:ಬೆಂಗಳೂರು ಜಿಲ್ಲಾ ಪೊಲೀಸ್ “ಅಲ್ಟ್ರಾ ಟೆಕ್ ಸಿಮೆಂಟ್”ಶ್ರೀ ರಾಮ ಇನ್ಸ್ಟಿಟ್ಯೂಷನ್ “ಸುಜ್ಞಾನ ದೀಪಿಕಾ ಸಂಸ್ಥೆ”ಮತ್ತು ಶ್ರೀ ಸೂರ್ಯ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ಕನ್ನಡ ಜಾಗೃತ ಭವನದಲ್ಲಿ ಕನ್ನಡ ಜಾಗೃತ ಭವನದ ಸಹಕಾರ ದೊಂದಿಗೆ “ರಸ್ತೆ ಸುರಕ್ಷತಾ ಸಪ್ತಾಹ”ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದಲ್ಲಿ ಸುಜ್ಞಾನ ದೀಪಿಕಾ ಸಂಸ್ಥೆಯ ನಿರ್ದೇಶಕರಾದ ಎಂ ಎಸ್ ಮಂಜುನಾಥ್ ರವರು ರಸ್ತೆ ಸುರಕ್ಷತಾ ನಿಯಮಗಳನ್ನು ಸಾಕ್ಷ್ಯಚಿತ್ರ ಪ್ರದರ್ಶನ ಮಾಡುವ ಮುಖಾಂತರ ವಿದ್ಯಾರ್ಥಿಗಳ ಮನಮುಟ್ಟುವಂತೆ ವಿವರಿಸಿದರು ಯಾವ ಯಾವ ಸಂದರ್ಭದಲ್ಲಿ ಯಾವ ಯಾವ ಕಾರಣದಿಂದ ಅಪಘಾತ ಗಳು ಸಂಭವಿಸುತ್ತವೆ ಎಂಬುದನ್ನು ಸಾಕ್ಷ್ಯಚಿತ್ರ ತೊರಿಸಿ ಸಂಪೂರ್ಣ ಮಾಹಿತಿ ನಿಡಿದರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀ ಸೂರ್ಯ ಎಜುಕೇಷನ್ ಟ್ರಸ್ಟ್ ವ್ಯವಸ್ಥಾಪಕ ನಿರ್ದೇಶಕರಾದ ಡಾ ಹೆಚ್ ಜಿ ವಿಜಯಕುಮಾರ್ ಅಪಘಾತಗಳು ಸಂಭವಿಸಿದಾಗ ತಕ್ಷಣ ಯಾವಕ್ರಮಕೈಗೊಳ್ಳಬೆಕು ಅಪಘಾತ ಸಂಭವಿಸದಂತೆ ಹೇಗೆ ಮುಂಜಾಗ್ರತೆ ವಹಿಸಬೇಕು ಎಂಬುದನ್ನು ಸಂಕ್ಷಿಪ್ತವಾಗಿ ವಿವರಿಸಿದರು ಕಾರ್ಯಕ್ರಮದಲ್ಲಿ ಅಲ್ಟ್ರಾ ಟೆಕ್ ಸಿಮೆಂಟ್ ಕಾರ್ಖಾನೆಯ ಜನರಲ್ ಮ್ಯಾನೇಜರ್ ಪಂಕಜ್ ಶರ್ಮಾ ಮತ್ತು ಪೋಲಿಸ್ ಸಬ್ ಇನ್ಸ್ಪೆಕ್ಟರ್ ಕೃಷ್ಣಪ್ಪ ಮಾತನಾಡಿದರು ಕಾರ್ಯಕ್ರಮದಲ್ಲಿ ಶ್ರೀ ಸೂರ್ಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಂ ಸಿ ಮಂಜುನಾಥ್ ಸರ್ಕಾರಿ ಜೂನಿಯರ್ ಕಾಲೇಜು ಉಪಪ್ರಾಂಶುಪಾಲರಾದ ದಾಕ್ಷಾಯಿಣಿ ಮಾನವ ಸಂಪನ್ಮೂಲ ಅಧಿಕಾರಿ ರವಿಚಂದ್ರ ಶೆಟ್ಟಿ ತಾಲ್ಲೂಕು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷರಾದ ಜಿ ಮುನಿಕೃಷ್ಣ ಕಾಡತಿಪ್ಪೂರು ಪ್ರೌಢಶಾಲಾ ಮುಖ್ಯ ಶಿಕ್ಷಕ ಜಿ ಎಸ್ ಚೌದರಿ ಹಾಗೂ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು.