ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ದುಶ್ಚಟಗಳಿಂದಾಗುವ ಪರಿಣಾಮಗಳ ಬಗ್ಗೆ ಮಾಹಿತಿ

ದೊಡ್ಡಬಳ್ಳಾಪುರ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲ್ಲೂಕು ಇವರ ವತಿಯಿಂದ ಕಂಟನಕುಂಟೆ ಸರ್ಕಾರಿ ಅನುದಾನಿತ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮವನ್ನು ಇಂದು ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಜನಜಾಗೃತಿ ಸದಸ್ಯರಾದ ನಾಗೇಶ್ ದುಶ್ಚಟಗಳಿಂದ ಆಗುವ ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.
ಪ್ರಸ್ತುತ ಶಾಲಾ ಕಾಲೇಜು ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯದ ಮೇಲೆ ಸಾಕಷ್ಟು ದುಷ್ಪರಿಣಾಮ ಬೀರುತ್ತಿದೆ,ಜೀವನ ಹಾಳು ಮಾಡಿಕೊಳ್ಳುತ್ತಿರುವುದು ದುರಂತವೆನಿಸುತ್ತಿದೆ ಎಂದರು.
ಸಂಪನ್ಮೂಲ ವ್ಯಕ್ತಿಗಳಾದ ನಿವೃತ್ತ ಉಪನ್ಯಾಸಕರಾದ ಮಹಾಲಿಂಗಯ್ಯ ದುಶ್ಚಟದಿಂದಾಗುವ ಪರಿಣಾಮಗಳ ಬಗ್ಗೆ ಮಕ್ಕಳಿಗೆ ಉತ್ತಮವಾದ ಮಾಹಿತಿ ನೀಡಿದರು..ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಶಿವಪ್ಪ ಒಕ್ಕೂಟದ ಅಧ್ಯಕ್ಷರಾದ ಪದ್ಮಾವತಿ ಹಾಗೂ ವಲಯ ಮೇಲ್ವಿಚಾರಕರಾದ ಗಿರೀಶ್ ಸೇವಾಪ್ರತಿನಿಧಿ ಪಾರ್ವತಮ್ಮ ಹಾಗೂ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು