ಗ್ರಂಥಾಲಯ ಸಲಹಾ ಸಮಿತಿ ಗೆ ಪ್ರಮೀಳಾ ಮಹದೇವ್ ನೇಮಕ

ದೊಡ್ಡಬಳ್ಳಾಪುರ:ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ಪರಿಣಾಮಕಾರಿ ನಿರ್ವಹಣೆಗೆ ಜಿಲ್ಲಾ ಪಂಚಾಯಿತಿ ಮಟ್ಟದಲ್ಲಿ ರಚಿಸಿರುವ ಸಲಹಾ ಸಮಿತಿಗೆ ಸದಸ್ಯರನ್ನಾಗಿ ಶ್ರೀಮತಿ ಪ್ರಮೀಳಾ ಮಹದೇವ್ ರವರನ್ನು ನೇಮಿಸಿ ಆದೇಶಿಸಲಾಗಿದೆ
ಜಿಲ್ಲಾ ಮಟ್ಟದ ಪುಸ್ತಕ ಆಯ್ಕೆ ಮತ್ತು ಖರೀದಿ ಮತ್ತು ಸಲಹೆ ನೀಡುವ ಸಮಿತಿ ಆಗಿರುತ್ತದೆ. ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ಶ್ರೀಮತಿ ಪ್ರಮೀಳಾ ಮಹಾದೇವ್ ರಾಜ್ಯದ ಗ್ರಂಥಾಲಯಗಳನ್ನು ಗ್ರಾಮೀಣ ಜನರು ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಸಲಹೆ, ಮಾರ್ಗದರ್ಶನ ನೀಡಲು ಜಿಲ್ಲಾ ಮಟ್ಟದಲ್ಲಿ ಸಲಹಾ ಸಮಿತಿಗಳನ್ನು ರಚಿಸಲು ಸರ್ಕಾರ ಆದೇಶಿಸಿದೆ. ಈ ಆದೇಶದನ್ವಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸಮಿತಿಗೆ ದೊಡ್ಡಬಳ್ಳಾಪುರದ ನಿಕಟ ಪೂರ್ವ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಪ್ರಮೀಳ ಮಹದೇವ್ ಸದಸ್ಯರಾಗಿ ನಿಯೋಜನೆ ಗೊಂಡಿದ್ದಾರೆ.