ಕೆ.ಆರ್.ಎಸ್ ಪಕ್ಷದಿಂದ ಯುವ ಕಾರ್ಯಕರ್ತರಿಗೆ ಯುವ ನಾಯಕತ್ವ ಶಿಬಿರ

ದೊಡ್ಡಬಳ್ಳಾಪುರ : ಯುವ ಕಾರ್ಯಕರ್ತರಿಗೆ ಯುವ ನಾಯಕತ್ವ ತರಬೇತಿ ಶಿಬಿರವನ್ನು ಏಪ್ರಿಲ್ 05 ಮತ್ತು 06ರಂದು ತುಮಕೂರು ಜಿಲ್ಲೆಯ ದೇವರಾಯನದುರ್ಗದಲ್ಲಿ ಹಮ್ಮಿಕೊಂಡಿದ್ದು, ಶಿಬಿರಾರ್ಥಿಗಳಿಗೆ ಉಚಿತ ಊಟ ವಸತಿ ಕಲ್ಪಿಸಲಾಗಿದೆ, ಶಿಬಿರದಲ್ಲಿ ಭಾಷಣಕಲೆ ಹಾಗೂ ಸಾಮಾಜಿಕ ಜಾಲತಾಣಗಳ ಕೌಶಲ್ಯ ತರಬೇತಿಗಳನ್ನು ಒಳಗೊಂಡಂತೆ ಹಲವು ವಿಚಾರಗಳನ್ನು ತಿಳಿಸಲಾಗುವುದು ಎಂದು ಕೆ ಆರ್ ಎಸ್ ಪಕ್ಷ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ. ಶಿವಶಂಕರ್ ತಿಳಿಸಿದರು

ನಗರದ KRS ಪಕ್ಷದ ಕಾರ್ಯಾಲಯದಲ್ಲಿ ನೆಡೆದ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು ಈ ಶಿಬಿರದಲ್ಲಿ ಸ್ವ ಅರಿವು ಮತ್ತು ಸ್ವ ವಿಮರ್ಶೆ ಜೊತೆಗೆ ನಾನೇಕೆ ರಾಜಕೀಯ ಮುಂದಾಳತ್ವ ವಹಿಸಬೇಕು ?ತನ್ನ ಸುತ್ತಮುತ್ತಲಿನ ಸಮಕಾಲೀನ ಸಮಸ್ಯೆಗಳನ್ನು ಮುಖಾಮುಖಿಯಾಗಿ ಎದುರಿಸುವುದು ಹೇಗೆ ? ಪ್ರಸ್ತುತ ರಾಜಕೀಯ ಸಮಕಾಲೀನ ಚಿಂತನೆಗಳು, ಪ್ರಜ್ಞಾಪೂರ್ವಕವಾಗಿ ಪ್ರಾಮಾಣಿಕ ರಾಜಕೀಯ ಮಾಡುವುದು ಅಲ್ಲದೆ ನಾಯಕತ್ವ ಅರ್ಥ, ವಿಧಗಳು ಇತ್ಯಾದಿ ವಿಷಯಗಳನ್ನೊಳಗೊಂಡಿದ್ದು, ಶಿಬಿರಾರ್ಥಿಗಳನ್ನು ವಿಮರ್ಶೆಗೊಳಪಡಿಸಿ ಸಮಾಜದ ಉತ್ತಮ ನಾಯಕಿ/ನಾಯಕರಾಗಲು ಹೆಚ್ಚಿನ ಅವಕಾಶಗಳನ್ನು ಕಲ್ಪಿಸಲಿದೆ ಎಂದರು .

ಏಪ್ರಿಲ್ 14ಕ್ಕೆ ಅದ್ದೂರಿ ಭೀಮೋತ್ಸವ ಕಾರ್ಯಕ್ರಮ

ಭಾರತ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಸವಿನೆನಪಿನಲ್ಲಿ ಇದೇ ತಿಂಗಳ ಏಪ್ರಿಲ್ 14ರಂದು ಬಳ್ಳಾರಿ ಜಿಲ್ಲೆಯಲ್ಲಿ ಅದ್ದೂರಿ ಭೀಮೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗುತ್ತಿದ್ದು, ರಾಜ್ಯದ ಎಲ್ಲಾ ಅಂಬೇಡ್ಕರ್ ಅಭಿಮಾನಿಗಳು, ಕೆ ಆರ್ ಎಸ್ ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ನಿರಂತರ ಬೆಲೆ ಏರಿಕೆ ವಿರುದ್ಧ ಉಗ್ರ ಹೋರಾಟ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರತಿದಿನವೂ ಒಂದಲ್ಲ ಒಂದು ರೀತಿ ಬೆಲೆ ಏರಿಕೆಯಾಗುತ್ತಲೇ ಇದೆ, ರಾಜ್ಯ ಜನರನ್ನು ಲೂಟಿ ಮಾಡಲಾಗುತ್ತಿದೆ. ನಿರಂತರ ಪ್ರತಿನಿತ್ಯ ಬಳಕೆಯಾಗುವ ದವಸ ಧಾನ್ಯಗಳು, ಹಾಲು, ಮೊಸರು, ತುಪ್ಪ,ಪೆಟ್ರೋಲ್, ಡೀಸೆಲ್, ಸೇರಿದಂತೆ ಎಲ್ಲಾ ವಸ್ತುಗಳ ದರ ಗಗನಕೇರುತ್ತಿದ್ದು, ಜನಸಾಮಾನ್ಯರು ಕೊಳ್ಳುವ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ. ಇದು ಉತ್ತಮ ಬೆಳವಣಿಗೆಯಲ್ಲ ಈ ಕುರಿತು ರಾಜ್ಯ ಸರ್ಕಾರ ಈ ಕೂಡಲೇ ಗಮನಹರಿಸಿ ಅಗತ್ಯ ವಸ್ತುಗಳ ಬೆಲೆಯನ್ನು ಸಾಮಾನ್ಯ ಜನರ ಕೈಗೆಟಕುವಂತೆ ಮಾಡಬೇಕಿದೆ ಇಲ್ಲದೆ ಹೋದಲ್ಲಿ ಮುಂದಿನ ದಿನಗಳಲ್ಲಿ ಕೆಆರ್‌ಎಸ್‌ ಪಕ್ಷದ ವತಿಯಿಂದ ರಾಜ್ಯಮಟ್ಟದಲ್ಲಿ ಉಗ್ರ ಹೋರಾಟಕ್ಕೆಗೊಳ್ಳಲಾಗುವುದು ಎಂದು ತಿಳಿಸಿದರು.

ಈ ತರಬೇತಿ ಶಿಬಿರವು 2 ದಿನ ನಡೆಯಲಿದ್ದು 2 ದಿನವೂ ಸಂಪೂರ್ಣವಾಗಿ ಸಕ್ರಿಯವಾಗಿ ಭಾಗವಹಿಸಬೇಕು. ಹಾಗೇ ಊಟ ಮತ್ತು ವಸತಿ ವ್ಯವಸ್ಥೆ ಮಾಡಲಾಗುತ್ತಿದೆ ಶಿಬಿರದಲ್ಲಿ ಪಾಲ್ಗೊಳ್ಳಲು ಬಯಸುವ ಯುವಕ/ ಯುವತಿಯರು ತಮ್ಮ ಹೆಸರನ್ನು 7619353525/8749065597 ಈ ಸಂಖ್ಯೆಗಳನ್ನು ಸಂಪರ್ಕಿಸುವ ಮೂಲಕ ನೋಂದಾಯಿಸಲು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಕೆಆರ್‌ಎಸ್ ಪಕ್ಷದ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಬಿ ಶಿವಶಂಕರ್ , ಜಿಲ್ಲಾ ಸಮಿತಿಯ ಕಾರ್ಮಿಕ ಘಟಕದ ಅಧ್ಯಕ್ಷರಾದ ಮಾರುತಿ, ತಾಲೂಕು ಪ್ರಧಾನ ಕಾರ್ಯದರ್ಶಿ ಮುರಾರಿ ದೊಡ್ಡಬಳ್ಳಾಪುರ , ಜಿಲ್ಲಾ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಲೀಲಾ ರಾಮ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ರಂಜಿತಾ, ಸೇರಿದಂತೆ ಹಲವು ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.