ಬಹುಜನ ಸಮಾಜ ಪಕ್ಷದ ವತಿಯಿಂದ ಆತ್ಮವಲೋಕನ ಸಭೆ
ದೊಡ್ಡಬಳ್ಳಾಪುರ : ಸ್ಥಳೀಯವಾಗಿ ಪಕ್ಷ ಸಂಘಟನೆಯನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಕಾರ್ಯಕರ್ತರ ಆತ್ಮವಲೋಕನ ಸಭೆಯನ್ನು ಆಯೋಜನೆ ಮಾಡಲಾಗಿದ್ದು ತಾಲೂಕು ಹಾಗೂ ಹೋಬಳಿ ಮಟ್ಟಗಳ ಪುನರ್ ರಚನೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಕುರಿತಂತೆ ಪೂರ್ವಭಾವಿ ಸಭೆ ನಡೆಸಲಾಗಿದೆ ಎಂದು ಬಹುಜನ ಸಮಾಜ ಪಾರ್ಟಿಯ ರಾಜ್ಯ ಸಂಯೋಜಕರಾದ ಅಶೋಕ್ ಚಕ್ರವರ್ತಿ ತಿಳಿಸಿದರು
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಕ್ಕ ಮಾಯಾವತಿಯವರ ನೇತೃತ್ವದ ಬಹುಜನ ಸಮಾಜ ಪಾರ್ಟಿ ಹೊಸ ಹುಮ್ಮಸ್ಸಿನೊಂದಿಗೆ ರಾಜ್ಯಾದ್ಯಂತ ಪಕ್ಷ ಸಂಘಟನೆಗೆ ಮುಂದಾಗಿದ್ದು, ಇಂದು ಬೆಂಗಳೂರು ವಲಯದ ಕಾರ್ಯಕರ್ತರೊಂದಿಗೆ ಸಂವಾದ ನೆಡೆಸಿದ್ದು, ಪಕ್ಷ ಸಂಘಟನೆಗೆ ಹೆಚ್ಚು ನೀಡಲಾಗುತ್ತಿದೆ ಎಂದರು
ಪ್ರಮುಖವಾಗಿ ರಾಜ್ಯದ ಪ್ರತಿ ಗ್ರಾಮಗಳಲ್ಲಿಯೂ ಬಹುಜನ ಸಮಾಜ ಪಕ್ಷದ ಸಂಘಟನೆ ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಈ ವಿಶೇಷ ಕಾರ್ಯಕ್ರಮ ಯೋಜನೆ ಮಾಡಿದ್ದು, ದಲಿತ ಹಾಗೂ ಇನ್ನುಳಿದ ವರ್ಗಗಳ ಧ್ವನಿಯಾಗಿ ಬಹುಜನ ಸಮಾಜ ಪಾರ್ಟಿ ನಿಲ್ಲಲಿದೆ ಎಂದರು.
ಬಹುಜನ ಸಮಾಜ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್ ನರಸಿಂಹಯ್ಯ ಮಾತನಾಡಿ ಇಂದು ಬೆಂಗಳೂರು ವಲಯ ( ರಾಮನಗರ ಚಿಕ್ಕಬಳ್ಳಾಪುರ ತುಮಕೂರು ಕೋಲಾರ ಬೆಂಗಳೂರು ಗ್ರಾಮಾಂತರ ಬೆಂಗಳೂರು ನಗರ ) ಮಟ್ಟದ ಕಾರ್ಯಕರ್ತರ ಸಭೆಯನ್ನು ಆಯೋಜನೆ ಮಾಡಲಾಗಿದ್ದು, ಈ ಸಭೆಯಲ್ಲಿ ಮುಖ್ಯವಾಗಿ ಪಕ್ಷವನ್ನು ತಳಮಟ್ಟದಿಂದ ಕಟ್ಟುವ ಕಾರ್ಯಕರ್ತರ ಆತ್ಮವಿಶ್ವಾಸವನ್ನು ವೃದ್ಧಿಸುವ ಆತ್ಮವಲೋಕನ ಕಾರ್ಯ ನಡೆಯಲಿದೆ , ಅಲ್ಲದೆ ರಾಜ್ಯ ಕೇಂದ್ರ ಕಚೇರಿಗೆ ಆಗಮಿಸುತ್ತಿರುವ ರಾಷ್ಟ್ರೀಯ ಸಂಯೋಜಕರಾದ ರಾಮ್ ಜಿ ರವರಿಗೆ ಕಾರ್ಯಕರ್ತರ ಸಿದ್ಧಪಟ್ಟಿಯನ್ನು ಕೊಡುವ ನಿಟ್ಟಿನಲ್ಲಿ ಇಂದು ಕಾರ್ಯಕರ್ತರ ಪಟ್ಟಿ ಸಿದ್ಧಪಡಿಸುಲು ಈ ಸಭೆ ಸಹಕಾರಿಯಾಗಿದೆ ಎಂದರು.
ದೇಶದ ಮೂರನೇ ಅತಿದೊಡ್ಡ ರಾಜಕೀಯ ಪಕ್ಷವೆಂದರೆ ಬಹುಶಃ ಅದು ನಮ್ಮ ಬಹುಜನ ಸಮಾಜ ಪಾರ್ಟಿ ಎಂದರೆ ತಪ್ಪಾಗಲಾರದು ಭಾರತದ ಸಂವಿಧಾನವನ್ನೇ ತನ್ನ ಪ್ರಣಾಳಿಕೆ ಹಾಕಿಸಿಕೊಂಡಿರುವ ಬಹುಜನ ಸಮಾಜ ಪಕ್ಷ ಕಾರ್ಯಕರ್ತರ ಪಕ್ಷವಾಗಿದೆ ಇದನ್ನು ಸದೃಢವಾಗಿ ಕಟ್ಟುವ ನಿಟ್ಟಿನಲ್ಲಿ ಇಂದು ನೂತನ ಪದಾಧಿಕಾರಿಗಳ ಪಟ್ಟಿ ಸಿದ್ಧಪಡಿಸುತ್ತಿದ್ದೇವೆ ಎಂದರು.
ಜಿಲ್ಲಾ ಸಂಚಾಲಕರಾದ ನಂಜಪ್ಪ,
ತಾಲೂಕು ಅಧ್ಯಕ್ಷರಾದ ಪಿ. ಏನ್. ಫಿಳ್ಳಪ್ಪ,
ಕಾರ್ಯದರ್ಶಿ ಅಂಜಿನಪ್ಪ,ಜಿಲ್ಲಾಧ್ಯಕ್ಷರು ನರಸಿಂಹರಾಜು,ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಆರ್ ಸೋಮಶೇಖರ್ ಉಪಸ್ಥಿತಿತರಿದ್ದರು.