ಸುಲಿಗೆಯನ್ನೇ ಮೂಲ ಮಂತ್ರ ಮಾಡಿಕೊಂಡಿರುವ ಭ್ರಷ್ಟ ಸರ್ಕಾರ ಸರ್ಕಾರ ಅದ್ಭುತ ಜೆಡಿಎಸ್ ಪ್ರತಿಭಟನೆ

ದೇವನಹಳ್ಳಿ :- ರಾಜ್ಯ ಕಾಂಗ್ರೆಸ್ ಸರ್ಕಾರದ ದರ ಏರಿಕೆ, ಭ್ರಷ್ಟಾಚಾರ, ದುರಾಡಳಿತ ಖಂಡಿಸಿ ಜೆಡಿಎಸ್ ಹಮ್ಮಿಕೊಂಡಿರುವ “ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ” ಅಭಿಯಾನಕ್ಕೆ ಜೆಡಿಎಸ್ ಯುವ ಮುಖಂಡ ರಘು ಚಾಲನೆ ನೀಡಿದರು.

ಬೆಂಗಳೂರು ನಗರದಲ್ಲಿಂದು ಫ್ರೀಡಂ ಪಾರ್ಕಿನ ಮೈದಾನದಲ್ಲಿ ಯುವ ಜನತಾದಳ ಕರೆ ನೀಡಿದ್ದ  ಕಾಂಗ್ರೆಸ್ ಸರ್ಕಾರದ ವೖಪಲ್ಯ ಖಂಡಿಸಿ ಪ್ರತಿಭಟನೆ ಯಲ್ಲಿ ಭಾಗವಹಿಸಿ ಮಾತನಾಡಿ, ಕಳೆದ ಚುನಾವಣೆ ಯಲ್ಲಿ ಇದೇ ಕಾಂಗ್ರೆಸ್ಸಿಗರು ಅಂದು ಇದ್ದಂತ ಸರ್ಕಾರದ ವಿರುದ್ಧ ಪೇ ಸಿಎಂ ಅಭಿಯಾನ ಮಾಡಿದ್ದರು. ಶೇ. ೪೦ ಕಮಿಷನ್ ಆರೋಪ ಮಾಡಿದ್ದರು. ನಮಗೊಂದು ಅವಕಾಶ ಕೊಡಿ ನಾವು ಸಂಪೂರ್ಣವಾಗಿ ಭ್ರಷ್ಟಾಚಾರ ವನ್ನು ನಿರ್ಮೂಲನೆ ಮಾಡುತ್ತೇವೆ ಎಂದು ಹೇಳಿದ್ದರು. ಆದರೆ ಈಗ ಭ್ರಷ್ಟಾಚಾರ ಅನ್ನುವುದು ಯಾವ ಹಂತಕ್ಕೆ ತಲುಪಿದೆ ಎಂದರೆ ಪರ್ಸೆಂಟೇಜ್ ಅನ್ನುವುದಕ್ಕೆ ಲಿಮಿಟೆಷನ್ ಇಲ್ಲ, ಲಿಮಿಟೆಷನ್ ಮೀರಿ ಹೋಗಿದೆ, ಜನಪರ ಕಾಳಜಿಯನ್ನು ಮರೆತು ಭ್ರಷ್ಟಾಚಾರದ ಭೂತ ದೃಷ್ಟ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಾಡುತ್ತಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಹೊಸಹಳ್ಳಿ ರವಿಕುಮಾರ್, ಚೇತನ್ ಗೌಡ, ಮಾರೇ ಗೌಡ, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.