ಅಲ್ಕೇರೆ ಅಗ್ರಹಾರ ಗ್ರಾಮದಲ್ಲಿ ಅದ್ದೂರಿಯಾಗಿ ನಡೆದ ಅಂಬೇಡ್ಕರ್ ಜಯಂತಿ
ಯಳಂದೂರು: ತಾಲ್ಲೂಕಿನ ಆಲ್ಕೇರೆ ಅಗ್ರಹಾರ ಗ್ರಾಮದಲ್ಲಿ ಬಹಳ ಅದ್ದೂರಿಯಾಗಿ ನಡೆದ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆಯನ್ನು ಗ್ರಾಮಸ್ಥರು ಸೇರಿ ಅದ್ದೂರಿಯಾಗಿ ಆಚರಣೆ ಮಾಡಿದರು
ಗ್ರಾಮದಲ್ಲಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಪೋಟೋವನ್ನು ಬೆಳ್ಳಿ ರಥದಲ್ಲಿ ಕೂರಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು
ಈ ಹಬ್ಬದ ಸಂಭ್ರಮವನ್ನು ಯುವಕ ಯುವತಿಯರು ಕುಣಿದು ಕುಪ್ಪಳಿಸಿ ಜಯಂತಿಯನ್ನು ಬಹಳ ಅದ್ದೂರಿಯಾಗಿ ಆಚರಣೆ ಮಾಡಿದರು
ಗ್ರಾಮದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ತಯಾರು ಮಾಡಿದ ಊಟವನ್ನು ಸಾರ್ವಜನಿಕರು ಸವಿದು ಸಂತೋಷ ವ್ಯಕ್ತಪಡಿಸಿದರು
ಈ ಜಯಂತಿ ಆಚರಣೆಯಲ್ಲಿ ಗ್ರಾಮದ ಯಜಮಾನರು ಮುಖಂಡರು ಯುವಕರು ಯುವತಿಯರು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು
ವರದಿ ಆರ್ ಉಮೇಶ್ ಮಲಾರಪಾಳ್ಯ